ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಎ.20: ರಾಜ್ಯ ಸರಕಾರವು 9 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ವಸತಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ರಾಜೀವ್ ಚಾವ್ಲಾರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ(ಇ-ಆಡಳಿತ) ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಕೆಎಟಿ ಅಧ್ಯಕ್ಷರಾಗಿದ್ದ ಕಪಿಲ್ ಮೋಹನ್‌ರನ್ನು ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ಹರ್ಷ ಗುಪ್ತರನ್ನು ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಕಲಬುರ್ಗಿಯ ಪ್ರಾದೇಶಿಕ ಆಯುಕ್ತರಾಗಿದ್ದ ಅಮ್ಲಾನ್ ಆದಿತ್ಯ ಬಿಸ್ವಾಸ್‌ರನ್ನು ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿಯನ್ನಾಗಿ ಹಾಗೂ ಬಿಬಿಎಂಪಿಯ ಹೆಚ್ಚುವರಿ ಆಯುಕ್ತ(ಆಡಳಿತ)ರಾಗಿದ್ದ ಪಾಂಡುರಂಗ ಬೊಮ್ಮಯ್ಯ ನಾಯ್ಕಾರನ್ನು ಹುಬ್ಬಳ್ಳಿಯ ಎನ್‌ಡಬ್ಲುಕೆಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಹುಬ್ಬಳ್ಳಿಯ ಎನ್‌ಡಬ್ಲುಕೆಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿನೋತ್ ಪ್ರಿಯಾರನ್ನು ಬೆಂಗಳೂರಿನ ವಿಶೇಷ ಜಿಲ್ಲಾಧಿಕಾರಿ-1 ಹಾಗೂ ಟಿ.ವೆಂಕಟೇಶ್‌ರನ್ನು ಕೆಎಟಿ ಸದಸ್ಯರನ್ನಾಗಿ ವರ್ಗವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಬೆಳಗಾವಿಯ ಎಸ್‌ಪಿವಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಲೈ ಮುಹಿಲಾನ್‌ರನ್ನು ಶಿವಮೊಗ್ಗ ನಗರ ಪಾಲಿಕೆಯ ಆಯುಕ್ತರನ್ನಾಗಿ ಹಾಗೂ ಕೆಎಎಸ್ ಅಧಿಕಾರಿ ಕೆ.ಎ.ದಯಾನಂದರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಹುದ್ದೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.