ಉದ್ಯಮಿ ಮುಹಮ್ಮದ್ ಹಾಜಿ
ಮಂಗಳೂರು, ಮೇ 19: ಉದ್ಯಮಿ, ಸಕಲೇಶಪುರ ಮಲ್ಲಿಕಾರ್ಜುನನಗರದ ನಿವಾಸಿ ಎಸ್.ಎಂ.ಮುಹಮ್ಮದ್ ಹಾಜಿ (ಚೈಯಬ್ಬ) (62) ನಿಧನರಾದರು.
ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತರು ಸಕಲೇಶಪುರ ಜುಮಾ ಮಸೀದಿಯ ಅಧ್ಯಕ್ಷ ಸಹಿತ ಇತರ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
Next Story