ಪಾರ್ವತಮ್ಮ ರಾಜ್ ಕುಮಾರ್ ಇನ್ನಿಲ್ಲ
ಬೆಂಗಳೂರು, ಮೇ 31: ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ ಹಾಗೂ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಇಂದು ಮುಂಜಾನೆ 4:30ರ ಸುಮಾರಿಗೆ ನಿಧನರಾಗಿದ್ದಾರೆ.
ಕೆಲ ಸಮಯದಿಂದ ತೀವ್ರ ಅಸ್ವಸ್ಥರಾಗಿದ್ದ ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಸೌಲಭ್ಯ ಕಲ್ಪಿಸಿ ಸುಗಮ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ವಿಷಮ ಸ್ಥಿತಿಯಲ್ಲಿದ್ದ ಅವರ ಚೇತರಿಕೆ ಬಗ್ಗೆ ಸ್ಪಷ್ಟ ಮಾಹಿತಿ ನೀಡಲು ವೈದ್ಯರು ನಿರಾಕರಿಸಿದ್ದರು.
ಇಂದು ಬೆಳಗ್ಗೆ ಪಾರ್ವತಮ್ಮ ರಾಜ್ ಕುಮಾರ್ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಪಾರ್ವತಮ್ಮ ನಿಧನದ ಸುದ್ದಿ ಕೇಳಿ ಬಂದಿರುವಂತೆಯೇ ಸಚಿವರು, ಚಿತ್ರೋದ್ಯಮದ ಗಣ್ಯರು, ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಸೇರಿದಂತೆ ಹಿರಿಯ ಅಧಿಕಾರಿಗಳು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಆಗಮಿಸಿಸಿದ್ದಾರೆ. ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಪೂರ್ಣಪ್ರಜ್ಞ ಶಾಲೆಯ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.