ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸಿಎಂಗೆ ಪರಮೇಶ್ವರ್ ಅಭಿನಂದನೆ
ಬೆಂಗಳೂರು, ಜೂ. 21: ಸತತ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿರುವ ರಾಜ್ಯ ಸರಕಾರ ಅನ್ನದಾತನ ಸಾಲಮನ್ನಾ ಮೂಲಕ ರೈತರ ಕಷ್ಟಕ್ಕೆ ಸ್ಪಂದಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಿಎಂ ಸಿದ್ಧರಾಮಯ್ಯ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಿ ಮೋದಿ ರೈತರ ಸಂಪೂರ್ಣ ಸಾಲಮನ್ನಾಕ್ಕೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಧಾನಿಯವರ ಮೇಲೆ ಒತ್ತಡ ಹೇರುವ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಬೇಕು ಎಂದು ಪರಮೇಶ್ವರ್ ಕೋರಿದ್ದಾರೆ.
ಬರ ಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ನಷ್ಟ ನೀಡುವ ವೇಳೆ ಕೇಂದ್ರ, ರಾಜ್ಯಕ್ಕೆ ತಾರತಮ್ಯ ಮಾಡಿದ್ದು, ನೆರೆ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿದೆ. ಆ ಮೂಲಕ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಿದೆ. ಕೇಂದ್ರದ ಅಸಹಕಾರದ ಮಧ್ಯೆಯೂ ರೈತರ ಹಿತರಕ್ಷಣೆಗೆ ದಿಟ್ಟ ನಿರ್ಧಾರ ಕೈಗೊಂಡಿದೆ ಎಂದು ಪರಮೇಶ್ವರ್ ಪ್ರಕಟಣೆಯಲ್ಲಿ ಶ್ಲಾಘಿಸಿದ್ದಾರೆ.
Next Story