ಎಸ್ಸಿ, ಎಸ್ಟಿ ಆಯೋಗದ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್
ಎಸ್ಸಿ, ಎಸ್ಟಿ ಆಯೋಗದ ಕಾರ್ಯವ್ಯಾಪ್ತಿ ವಿಚಾರ
ಬೆಂಗಳೂರು, ಜು.1: ರಾಜ್ಯ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಆಯೋಗದ ಕಾರ್ಯವ್ಯಾಪ್ತಿ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೋರಿ ರಾಜ್ಯ ಕೃಷಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ ಬಿ.ಹಿಂಚಿಗೇರಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಆಯೋಗದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಆಯೋಗ ಮನಸೋ ಇಚ್ಛೆ ಆದೇಶ ಹಾಗೂ ಕಾನೂನು ಬಾಹಿರವಾಗಿ ವಾರಂಟ್ ಹೊರಡಿಸುತ್ತಿದೆ. ಹೀಗಾಗಿ, ಇದರ ನಿರ್ದಿಷ್ಟ ಕಾರ್ಯವ್ಯಾಪ್ತಿ ಏನಿದೆ ಎಂಬುದನ್ನು ಕೋರ್ಟ್ ತಿಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
Next Story