ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಬಿಜೆಪಿ ಸೇರ್ಪಡೆ
ಬೆಂಗಳೂರು, ಜು.2: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಹಳ ದಿನಗಳಿಂದ ಪಕ್ಷಕ್ಕೆ ಬರಬೇಕು ಅಂತಿದ್ರು, ಈಗ ಕಾರ್ಯಕರ್ತರ ಅಪೇಕ್ಷೆಯಂತೆ ಅವರನ್ನು ಬರಮಾಡಿಕೊಳ್ಳುತ್ತಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪಹೇಳಿದರು.
ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷ್ಣಯ್ಯ ಶೆಟ್ಟಿಯನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡ ಬಳಿಕ ಅವರು ಮಾತನಾಡುತ್ತಿದ್ದರು.
ಜಿ.ಎಸ್.ಟಿ. ಕ್ರಾಂತಿಕಾರಿ ಸುಧಾರಣೆ. ಇನ್ನು ಮುಂದೆ ತೆರಿಗೆ ತಪ್ಪಿಸುವವರಿಗೆ ರಕ್ಷಣೆ ಇಲ್ಲ ಎಂದರು.
ಕೃಷ್ಣಯ್ಯ ಶೆಟ್ಟಿ ಮಾತನಾಡಿ, ಒಂದು ಹಂತದಲ್ಲಿ ತಪ್ಪು ನಿರ್ಧಾರ ಮಾಡಿ ಪಕ್ಷ ಬಿಟ್ಟೆ. ಮತ್ತೆಂದು ತಪ್ಪುಮಾಡುವುದಿಲ್ಲ. ಇಡೀ ಕೋಲಾರ ಜಿಲ್ಲೆಯಲ್ಲಿ ಕೆಲಸ ಮಾಡಿ ಪಕ್ಷದ ಋಣ ತೀರಿಸಲು ಪ್ರಾಮಾಣಿಕವಾಗಿ ಶ್ರಮಿಸುವೆ ಎಂದರು.
ಪಿ.ಸಿ.ಮೋಹನ್, ಸಂಪಂಗಿ, ಬಿ.ಜೆ.ಪುಟ್ಟಸ್ವಾಮಿ, ಡಿ.ಎಸ್.ವೀರಯ್ಯ, ಬಿ.ಶ್ರೀರಾಮುಲು, ಜಯದೇವ್, ರವಿಕುಮಾರ್, ಮುನಿವೆಂಕಟಪ್ಪ ಉಪಸ್ಥಿತರಿದ್ದರು.ಕೋಲಾರ ಜಿಲ್ಲೆಯ ನೂರಾರು ಕಾರ್ಯಕರ್ತರು ಹಾಜರಿದ್ದರು.