ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಜು.2: ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ 2017-18ನೆ ಸಾಲಿಗಾಗಿ 2017ರಲ್ಲಿ ನಡೆದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲನಿವಾಸಿ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಯನ್ನು ನೀಡುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಂದ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಆಗಸ್ಟ್ 30 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದು.
Next Story