ಯಂಕೇನ್ ಹೊಳಿಯಪ್ಪ
ಸೊರಬ, ಜು. 10: ಕೊಡಕಣಿ ಗ್ರಾಮದ ಖ್ಯಾತ ನಾಟಿ ವೈದ್ಯ ಯಂಕೇನ್ ಹೊಳಿಯಪ್ಪ (68) ಅಲ್ಪಕಾಲದ ಅಸೌಖ್ಯದಿಂದ ಶಿವಮೊಗ್ಗ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಬಂಧುಬಳಗವನ್ನು ಅಗಲಿದ್ದಾರೆ.
ಮೂಲವ್ಯಾದಿ, ಮೂಳೆ ನೋವು ಹಾಗೂ ಮೂಳೆ ಮುರಿತ ಸೇರಿದಂತೆ ಹಲವು ಕಾಯಿಲೆಗಳಿಗೆ ನಾಟಿ ಔಷಧಿ ನೀಡಿ ಸಾವಿರಾರು ರೋಗಿಗಳನ್ನು ಗುಣಪಡಿಸಿದ್ದರು, ಅಲ್ಲದೆ ಅನೇಕ ಜಾತಿಯ ಗಿಡಗಳನ್ನು ಬೆಳೆಸಿ ಮಾರಾಟ ಮಾಡುವುದರ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಯಂಕೇನ್ ಹೊಳಿಯಪ್ಪ ಅವರ ನಿಧನಕ್ಕೆ ಶಾಸಕ ಮಧು ಬಂಗಾರಪ್ಪ, ಮಾಜಿ ಸಚಿವರುಗಳಾದ ಹೆಚ್.ಹಾಲಪ್ಪ, ಕುಮಾರ್ ಬಂಗಾರಪ್ಪ ಸೇರಿದಂತೆ ಹಲವು ಗಣ್ಯರು, ಗ್ರಾಮಸ್ಥರು ಹಾಗೂ ಅಪಾರ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
Next Story