ಅರ್ಜಿ ಆಹ್ವಾನ
ಉಡುಪಿ, ಜು.11: ರಾಜ್ಯ ಸರಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಿದೆ.
2017ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ಸಂಬಂಧಿಸಿದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಂದ ಪಡೆದು, ಭರ್ತಿಮಾಡಿದ ಅರ್ಜಿಗಳನ್ನು ದ್ವಿ-ಪ್ರತಿಯಲ್ಲಿ ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇವರಿಗೆ ಆ.30ರೊಳಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಅರ್ಜಿಗಳು ಕನ್ನಡ ಭಾಷೆಯಲ್ಲೇ ಇರಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ-204, 1ನೇ ಮಹಡಿ, ರಜತಾದ್ರಿ, ಮಣಿಪಾಲ (ದೂರವಾಣಿ:0820-2574978/ 2574972) ಇವರನ್ನು ಸಂಪರ್ಕಿಸುವಂತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.