ಬಂಟ್ವಾಳ, ಆ. 15: ನೆಟ್ಲ ಮುಡ್ನೂರು ಗ್ರಾಮದ ಪೊಟ್ಟುಕೆರೆ ನಿವಾಸಿ ಇಸ್ಮಾಯೀಲ್ ಹಾಜಿ (90) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು.
ಮೃತರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಉಮ್ಮರ್ ಕುಂಞಿ ಸಹಿತ 10 ಮಂದಿ ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.