varthabharthi


ದಸರಾ ವಿಶೇಷ

ಮೈಸೂರಿನಲ್ಲಿ ನಾಳೆ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ

ವಾರ್ತಾ ಭಾರತಿ : 29 Sep, 2017

ಮೈಸೂರು , ಸೆ.29:ದಸರಾ ಹಬ್ಬದ ಸಂಭ್ರಮದಲ್ಲಿರುವ  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆ ಶನಿವಾರ ನಡೆಯಲಿದೆ. ದಸರಾ ಆಚರಣೆಯ ಕೇಂದ್ರ ಬಿಂದುವಾಗಿರುವ   ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ನಡೆಯುತ್ತಿದೆ.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನೇತೃತ್ವದಲ್ಲಿ . 

ಕೋಡಿ ಸೋಮೇಶ್ವರ ದೇವಸ್ಥಾನದಲ್ಲಿ  ಅರಮನೆಯ ಪಟ್ಟದ ಕತ್ತಿ ಹಾಗೂ ಇನ್ನಿತರ ಕೆಲವು ಆಯುಧಗಳಿಗೆ ಪೂಜೆ ಸಲ್ಲಿಸಲಾಗುತ್ತಿದೆ.

ಸಂಜೆ 7 ಗಂಟೆಗೆ ಈ ಸಲದ ಅಂತಿಮ ಖಾಸಗಿ ದರ್ಬಾರ್ ನಡೆಯಲಿದೆ.

 ಶನಿವಾರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2.15ರ ಶುಭ ಮಕರ ಲಗ್ನದಲ್ಲಿ ಸಿದ್ದರಾಮಯ್ಯ ಅವರು ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ಚಾಲನೆ ನೀಡಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)

ಟಾಪ್ ಸುದ್ದಿಗಳು