‘‘ಈಜಾಟದ ಪ್ರಯೋಜನಗಳ ಬಗ್ಗೆ ಹತ್ತು ವಾಕ್ಯಗಳಲ್ಲಿ ಬರೆಯಿರಿ’’ ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರಶ್ನೆ ಪತ್ರಿಕೆಯಲ್ಲಿ ಹೀಗೊಂದು ಪ್ರಶ್ನೆ. ಹಳ್ಳಿಯಿಂದ ಬಂದ ಸಿದ್ದನಿಗೆ ಆ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗಲಿಲ್ಲ. ಯಾಕೆಂದರೆ ಸಿದ್ದನಿಗೆ ಈಜು ಗೊತ್ತಿತ್ತು. ಇಂಗ್ಲಿಷ್ ಗೊತ್ತಿರಲಿಲ್ಲ.