ಕೊಡಗು ಜಿಲ್ಲಾ ಚುನಾವಣಾ ಸಮಿತಿಯ ಅಧ್ಯಕ್ಷರಾಗಿ ಸರಿತಾ ಪೂಣಚ್ಚ ಆಯ್ಕೆ
ಮಡಿಕೇರಿ, ಮಾ. 17: ಕೊಡಗು ಜಿಲ್ಲಾ ಕಾಂಗ್ರೆಸ್ ಚುನಾವಣಾ ಸಮಿತಿಯ ನೂತನ ಅಧ್ಯಕ್ಷರಾಗಿ ಸರಿತಾ ಪೂಣಚ್ಚ ಆಯ್ಕೆಯಾಗಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಬಿ.ಶಿವುಮಾದಪ್ಪ, ರಾಜ್ಯ ಕಾಂಗ್ರೆಸ್ ಪಕ್ಷದ ಚನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ನೂತನವಾಗಿ ಚುನಾವಣಾ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಚುನಾವಣಾ ಸಮಿತಿಯ ಸಂಚಾಲಕರಾಗಿ ಎಸ್.ಎಂ.ಚಂಗಪ್ಪ, ಕಾರ್ಯದರ್ಶಿಯಾಗಿ ಎನ್.ಬಾಲಚಂದ್ರ ನಾಯರ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮತ್ರಂಡ ದಿಲ್ಲು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಪಿ.ಎಂ.ಲತೀಪ್ ಆಯ್ಕೆಯಾಗಿದ್ದಾರೆ.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜೇನುಕುರುಬರ ಸೋಮಯ್ಯ, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾಗಿ ಕುಟ್ಟಂಡ ಕೃಷ್ಣ, ನಾಪೋಕ್ಲು ಬ್ಲಾಕ್ ಅಧ್ಯಕ್ಷರಾಗಿ ಹೊಸೂರು ಸೂರಜ್, ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಪಾಪು ಸಣ್ಣಯ್ಯ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಲಾರೆನ್ಸ್ ಅವರನ್ನು ಆಯ್ಕೆಮಾಡಲಾಗಿದೆ ಎಂದು ಎಂ.ಬಿ. ಶಿವುಮಾದಪ್ಪ ತಿಳಿಸಿದ್ದಾರೆ.