ಹಿರಿಯ ನಟಿ ಜಯಂತಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಬೆಂಗಳೂರು, ಮಾ26: ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕಳೆದ ಕೆಲವು ಸಮಯದಿಂದ ಕಾಡುತ್ತಿರುವ ಅಸ್ತಮಾ ಸಮಸ್ಯೆ ಉಲ್ಬಣಿಸಿದ ಕಾರಣ ಅವರನ್ನು ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
‘‘ನಮ್ಮ ತಾಯಿಗೆ ಕಳೆದ 30 ವರ್ಷಗಳಿಂದ ಅಸ್ತಮಾ ಸಮಸ್ಯೆಯಿದ್ದು, ನಿನ್ನೆ ಜಾಸ್ತಿಯಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದ್ದು, 24 ಗಂಟೆಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇಡಲಾಗುವುದೆಂದು ವೈದ್ಯರು ತಿಳಿಸಿದ್ದಾರೆ’’ಎಂದು ಜಯಂತಿ ಅವರ ಪುತ್ರ ಕೃಷ್ಣಕುಮಾರ್ ತಿಳಿಸಿದ್ದಾರೆ.
Next Story