ಉಡುಪಿ, ಜು.14: ಕಾಪು ಕುತ್ಯಾರು ನಿವಾಸಿ ಅಬ್ದುಲ್ ಹಮೀದ್ (79) ಅಲ್ಪಕಾಲದ ಅಸೌಖ್ಯದಿಂದ ಜು.12ರಂದು ಸ್ವಗೃಹದಲ್ಲಿ ನಿಧನರಾದರು.
ಇವರು ಉಡುಪಿಯ ಜಾಮೀಯ ಮಸೀದಿಯಲ್ಲಿ ಸುಮಾರು 14ವರ್ಷಕ್ಕೂ ಅಧಿಕ ಕಾಲ ಸೆಕ್ಯುರಿಟಿ ಗಾರ್ಡ್ ಆಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.