ಜಿಲ್ಲಾ ಮಟ್ಟದ ಅಸಾಧಾರಣ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ, ಜು.28: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆ ಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ 2018-19 ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕಲೆ, ಕ್ರೀಡೆ, ಸಾಂಸ್ಕೃತಿಕ, ಸಮಾಜ ಸೇವೆ, ಸಂಗೀತ ಕ್ಷೇತ್ರಗಳಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಪ್ರತಿ ಪ್ರತಿಭಾ ಕ್ಷೇತ್ರದಿಂದ ಇಬ್ಬರಂತೆ ಒಟ್ಟು 14 ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಪ್ರತಿ ಮಗುವಿಗೆ ತಲಾ 10 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಮಕ್ಕಳ ವಯಸ್ಸು 5ರಿಂದ 18 ವರ್ಷದೊಳಗಿರಬೇಕು. ಈ ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಮತ್ತೆ ಪ್ರಶಸ್ತಿ ನೀಡಲಾಗುವುದಿಲ್ಲ.
ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಒದಗಿಸ ಬೇಕು. ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಆ.31 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0820-2574978ನ್ನು ಸಂಪರ್ಕಿಸುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿದೇಶಕರ ಪ್ರಕಟಣೆ ತಿಳಿಸಿದೆ.