ಜು.31ರಂದು ವಕ್ಫ್ ಮಾಹಿತಿ ಕೇಂದ್ರ ಉದ್ಘಾಟನೆ
ಉಡುಪಿ, ಜು.30: ರಾಜ್ಯ ವಕ್ಫ್ ಮಂಡಳಿಯ ನಿರ್ದೇಶನದಂತೆ ಬ್ರಹ್ಮಗಿರಿ ನಾಯರ್ಕೆರೆಯ ಹಾಶಿಮೀ ಜುಮಾ ಮಸೀದಿ ಆವರಣದಲ್ಲಿ ನೂತನವಾಗಿ ಆರಂಭಿಸಲಾಗಿರುವ ವಕ್ಫ್ ಮಾಹಿತಿ ಕೇಂದ್ರದ ಉದ್ಘಾಟನೆಯು ಜು.31ರಂದು ಬೆಳಗ್ಗೆ 11ಗಂಟೆಗೆ ನಡೆಯಲಿದೆ.
ಅಲ್ಪಸಂಖ್ಯಾತರ ಸಮುದಾಯ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಆರ್ಥಿಕ, ಆಧ್ಯಾತ್ಮಿಕ ಏಳಿಗೆ ಹಾಗೂ ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಒಳ ಗೊಂಡ ಮಾಹಿತಿಯನ್ನು ನೀಡುವ ಉದ್ದೇಶದಿಂದ ಈ ಕೇಂದ್ರವನ್ನು ಆರಂಭಿಸ ಲಾಗಿದೆ ಎಂದು ಉಡುಪಿ ಜಿಲ್ಲಾ ವಕ್ಫ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story