ನಿಧನ: ಮುಸ್ಲಿಂ ಲೀಗ್ ಕಾರ್ಯಕರ್ತ ಅಬ್ದುಲ್ ರಹಿಮಾನ್ ಬಾವ ಬೆಂಗ್ರೆ
ಮಂಗಳೂರು, ಜು.30: ಮುಸ್ಲಿಂ ಲೀಗ್ ಕಾರ್ಯಕರ್ತ ಅಬ್ದುಲ್ ರಹಿಮಾನ್ ಬಾವ ಬೆಂಗ್ರೆ (60) ಬೆಂಗ್ರೆ ಗ್ರಾಮದ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.
ಮೃತರು ಪತ್ನಿ, ಮೂವರು ಗಂಡು ಮಕ್ಕಳು, ಇಬ್ಬರು ಹೆಣ್ಣುಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತ ಅಬ್ದುಲ್ ರಹಿಮಾನ್ ಬಾವ ಬೆಂಗ್ರೆಯಲ್ಲಿ ಅಂಗಡಿಯನ್ನಿಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದು, ಮುಸ್ಲಿಂ ಲೀಗ್ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿದ್ದರು.
ಅವರ ನಿಧನಕ್ಕೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದ.ಕ. ಜಿಲ್ಲಾ ಸಮಿತಿಯು ಸಂತಾಪ ವ್ಯಕ್ತಪಡಿಸಿದೆ.
Next Story