ಪೊಲೀಸ್ ಹುದ್ದೆ: ಆ.5ರಂದು ಲಿಖಿ ಪರೀಕ್ಷೆ
ಉಡುಪಿ, ಜು.30: ಉಡುಪಿ ಜಿಲ್ಲಾ ಪೊಲೀಸ್ ಘಟಕಕ್ಕೆ ಸಂಬಂಧಿಸಿದ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳಿಗೆ ಉಡುಪಿಯ ಎಂಜಿಎಂ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿರುವ ಎರಡು ಕೇಂದ್ರಗಳಲ್ಲಿ ಆ.5ರಂದು ಲಿಖಿತ ಪರೀಕ್ಷೆ ನಡೆಸ ಲಾಗುತ್ತಿದೆ. ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಿಗದಿತ ಗುರುತಿನ ಚೀಟಿಯೊಂದಿಗೆ ಪರೀಕ್ಷೆಗೆ ಹಾಜರಾಗಬೇಕು. ಲಿಖಿತ ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮತ್ತು ಪ್ರವೇಶ ಪತ್ರಕ್ಕಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ www.ksp.gov.inನ್ನು ಪರಿಶೀಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story