ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ
ಉಳ್ಳಾಲ, ಜು. 30: ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬದ ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟಿನಲ್ಲಿ ಸೋಮವಾರ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ ಮೇಲ್ಸೇತುವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ನಡೆಸದಿದ್ದರೆ ಟೋಲ್ಗೇಟ್ ಬಂದ್ ಮಾಡುತ್ತೇನೆ ಎಂದು ಹೇಳಿದರೂ ಅತ್ತ ಟೋಲ್ಗೇಟ್ ಬಂದ್ ಆಗಿಲ್ಲ. ಇದೀಗ ಡಿಸೆಂಬರ್ ಅಂತ್ಯದೊಳಗೆ ಮುಗಿಸುತ್ತೇವೆ ಎಂದು ಭರವಸೆ ನೀಡಿರುವ ಸಂಸದರು ಇಂತಹ ಒಂದು ಪುಣ್ಯದ ಕೆಲಸ ಮಾಡಲಿ ಎಂದರು.
ಮೂಡಾದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಪ್ರತಿಭಟನೆ, ಸೇರಿದಂತೆ ಮನವಿ ಮಾಡಿದರು ತೊಕ್ಕೊಟ್ಟು ಸಮಸ್ಯೆಗೆ ಸ್ಥಳೀಯ ಸಂಸದರು ಇನ್ನೂ ಕ್ರಮ ಕೈಗೊಂಡಿಲ್ಲ. ಮುಂದಿನ ವರ್ಷದೊಳಗೆ ಬರುವ ಲೋಕಸಭೆಯಲ್ಲಿ ಚುನಾವಣೆಯಲ್ಲಿ ಮತದಾರರು ಉತ್ತರ ನೀಡಲಿದ್ದಾರೆ ಎಂದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯರಾದ ಅಬ್ದುಲ್ ಜಬ್ಬಾರ್ ಬೋಳಿಯಾರ್, ಪದ್ಮಾವತಿ ಪೂಜಾರಿ, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ್ ಭಟ್ನಗರ, ಸಂಘಟನಾ ಕಾರ್ಯದರ್ಶಿಗಳಾದ ಇಕ್ಬಾಲ್ ಸಾಮಾಣಿಗೆ, ಸಲೀಂ ಮೆಗಾ ಅಸೈಗೋಳಿ, ವರ್ಗದ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉಮ್ಮರ್ ಪಜೀರ್, ನಗರಸಭಾ ಅಧ್ಯಕ್ಷ ಹುಸೈನ್ ಕುಂಞಿಮೋನು, ಸದಸ್ಯರಾದ ದಿನೇಶ್ ರೈ, ಬಾಝಿಲ್ ಡಿಸೋಜ, ಕೊಣಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ಅಚ್ಚುತ ಗಟ್ಟಿ, ಎಪಿಎಂಸಿ ಉಪಾಧ್ಯಕ್ಷೆ ಮುತ್ತು ಶೆಟ್ಟಿ, ಮುಖಂಡ ಶ್ರೀನಿವಾಸ ಶೆಟ್ಟಿ ಪುಲ್ಲು, ಹಿರಿಯ ಮುಖಂಡೆ ಸುಹಾಸಿನಿ ಬಬ್ಬುಕಟ್ಟೆ, ಕ್ಲೇರಾ ಕುವೆಲ್ಲೋ, ಪಿಯೂಷ್ ಮೊಂತೇರೋ, ಶ್ರೀನಿವಾಸ್ ಶೆಟ್ಟಿ ಪುಲ್ಲು ಉಪಸ್ಥಿತರಿದ್ದರು.
ಸಾಂಕೇತಿಕವಾಗಿ ತೊಕ್ಕೊಟ್ಟು ಜಂಕ್ಷನ್ನಲ್ಲಿ ರಸ್ತೆ ತಡೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್ ಸ್ವಾಗತಿಸಿದರು.