ನೆರಿಯ: ಅಪಘಾತ ನಡೆಸಿ ಯುವತಿಗೆ ಲೈಂಗಿಕ ಕಿರುಕುಳ; ಆರೋಪಿ ಸೆರೆ
ಬೆಳ್ತಂಗಡಿ, ಜು.30: ನೆರಿಯದಲ್ಲಿ ಪಿಕಪ್ ಚಾಲಕನೋರ್ವ ಪಿಕಪ್ನ್ನು ರಿಕ್ಷವೊಂದಕ್ಕೆ ಢಿಕ್ಕಿ ಹೊಡೆಸಿ ಅದರಲ್ಲಿದ್ದ ಯುವತಿಯರನ್ನು ಎಳೆದಾಡಿ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದು ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ, ಸ್ಥಳೀಯ ನಿವಾಸಿ ಥೋಮಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಥೋಮಸ್ ಇಂದು ಸಂಜೆ ಪಾನಮತ್ತನಾಗಿ ತನ್ನ ಪಿಕಪ್ ವಾಹನವನ್ನು ಚಲಾಯಿಸಿಕೊಂಡು ಅಣಿಯೂರು ಸಮೀಪ ರಿಕ್ಷಾಗೆ ಢಿಕ್ಕಿ ಹೊಡೆಸಿದನೆನ್ನಲಾಗಿದೆ. ಇದರಿಂದ ರಿಕ್ಷಾ ಚಾಲಕ ಸತೀಶ್ ಎಂಬವರು ಗಾಯಗೊಂಡಿದ್ದರು. ಅಲ್ಲದೆ ರಿಕ್ಷಾದಲ್ಲಿದ್ದ ದಲಿತ ಯುವತಿಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿ ಪರಾರಿಯಾಗಿದ್ದ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಗಾಯಾಳುಗಳಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು. ಬಳಿಕ ಸಂಘ ಪರಿವಾರದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಪರಿಸರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಸಂತ್ರಸ್ಥರನ್ನು ಸಮಾಧಾನಪಡಿಸಿದರು. ಆರೋಪಿಯ ವಿರುದ್ಧ ಸೂಕ್ತ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದರು. ಬಂಟ್ವಾಳ ಎಎಸ್ಪಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಮಿಸಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಈ ನಡುವೆ ಆರೋಪಿ ಥೋಮಸ್ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದರು. ಪ್ರಕರಣದ ಆರೋಪಿ ಈ ಹಿಂದೆಯೂ ಹಲವು ಪ್ರಕರಣಗಳಲ್ಲಿ ಭಾಗಿಯಾ ಗಿದ್ದಾನೆ ಎಂದು ಹೇಳಲಾಗುತ್ತಿದ್ದು, ಈತನ ಸಹೋದರನೊಬ್ಬ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಜೈಲಿಗೂ ಹೋಗಿ ಬಂದಿದ್ದ ಇದು ಸಾರ್ವಜನಿಕರ ಆಕ್ರೋಶ ಕೆರಳಿಸಲು ಕಾರಣವಾಗಿದೆ. ಬಂಟ್ವಾಳ ಎ.ಎಸ್ಪಿ ಹಾಗೂ ಹಿರಿಯ ಪೋಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಮಿಸಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ.