ಅಲ್ಪಸಂಖ್ಯಾತ ನರ್ಸಿಂಗ್/ಪ್ಯಾರಾಮೆಡಿಕಲ್ ವಿದ್ಯಾರ್ಥಿಗೆ ಶಿಷ್ಯವೇತನ
ಉಡುಪಿ, ಜು.31: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿನಲ್ಲಿ ಜಿಎನ್ಎಂ, ಬಿಎಸ್ಸಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕೋರ್ಸುಗಳಲ್ಲಿ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಗರಿಷ್ಠ 35 ಸಾವಿರ ರೂ.ಗಳ ಶಿಷ್ಯವೇತನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿರಬೇಕು. ಆಯಾ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.40 ಅಂಕಗಳನ್ನು ಪಡೆದಿರಬೇಕು. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಆ.31ಕೊನೆಯ ದಿನವಾಗಿದೆ.
ಅರ್ಜಿ ನಮೂನೆ ಇಲಾಖೆ ವೆಬ್ಸೈಟ್-https://gokdom.kar.nic.in- ಅಥವಾ-https://dom.karnataka.gov.in/udupi -ನಿಂದ ಪಡೆದು ಭರ್ತಿ ಮಾಡಿ ತಹಶೀಲ್ದಾರ್ರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ಹಿಂದಿನ ತರಗತಿ ಅಂಕಪಟ್ಟಿಯ ದೃಢೀಕೃತ ಪ್ರತಿ, ಎಸೆಸೆಲ್ಸಿ ಅಂಕಪಟ್ಟಿಯ ದೃಢೀಕೃತ ಪ್ರತಿ, ಪ್ರವೇಶಕ್ಕೆ ಭರಿಸಿದ ಶುಲ್ಕದ ದೃಢೀಕೃತ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ಕಾರ್ಡ್ ಪ್ರತಿಗಳಿಗೆ ಕಾಲೇಜಿನ ಪ್ರಾಂಶುಪಾಲರಿಂದ ಧೃಢೀಕರಿಸಿ, ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಮಣಿಪಾಲ, ಉಡುಪಿ ಜಿಲ್ಲೆ ಇವರಿಗೆ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ, ಮಣಿಪಾಲ (ದೂರವಾಣಿ:0820-2574596), ಕಾರ್ಕಳ (ದೂರವಾಣಿ: 08258-231101), ಕುಂದಾಪುರ (ದೂರವಾಣಿ:08254-230370) ಇವರಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.