ನಾಳೆ ಉಡುಪಿಗೆ ಸಚಿವೆ ಜಯಮಾಲ
ಉಡುಪಿ, ಆ.4: ಉಡುಪಿ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕ ಗೊಂಡಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲ ಆ.5 ರಂದು ರವಿವಾರ ಅಪರಾಹ್ನ 3:30ಕ್ಕೆ ಉಡುಪಿ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಆದ್ದರಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story