ಉಡುಪಿ: ಕೊಳವೆ ಬಾವಿಗೆ ಅರ್ಜಿ ಆಹ್ವಾನ
ಉಡುಪಿ, ಆ.5: 2018-19ನೇ ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ತೆರೆದ ಬಾವಿ ಅಥವಾ ಕೊಳವೆ ಬಾವಿಯನ್ನು ಪಡೆಯಲು ಕನಿಷ್ಠ ಒಂದು ಎಕರೆ ಜಮೀನಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ರೈತರಿಗೆ ಅವಕಾಶವಿದೆ.
ಇದಕ್ಕಾಗಿ ಅರ್ಜಿದಾರರು 18ರಿಂದ 60 ವರ್ಷದೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 1.50 ಲಕ್ಷ ರೂ. ಹಾಗೂ ನಗರ ಪ್ರದೇಶವರಿಗೆ 2 ಲಕ್ಷ ರೂ.ಗಳ ಮಿತಿಯಿದೆ.
ಇದಕ್ಕಾಗಿ ಅರ್ಜಿದಾರರು 18ರಿಂದ 60 ವರ್ಷದೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 1.50 ಲಕ್ಷ ರೂ. ಹಾಗೂ ನಗರ ಪ್ರದೇಶದವರಿಗೆ 2 ಲಕ್ಷ ರೂ.ಗಳ ಮಿತಿಯಿದೆ. ಅರ್ಜಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ಇಲ್ಲಿಂದ ಉಚಿತವಾಗಿ ಪಡೆಯಬಹುದು.
ಅರ್ಜಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ಇಲ್ಲಿಂದ ಉಚಿತವಾಗಿ ಪಡೆಯಬಹುದು.
ಅರ್ಹ ಅರ್ಜಿದಾರರು ಅರ್ಜಿಯೊಂದಿಗೆ ಪಾಸ್ಪೋರ್ಟ್ ಸೈಜಿನ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಆರ್ಟಿಸಿ, ತಹಶೀಲ್ದಾರರಿಂದ ಪಡೆದ ಸಣ್ಣ ರೈತರ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ಆ.31ರೊಳಗೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.