ಪಂಚಗಂಗಾವಳಿ ಹೊಳೆಯಲ್ಲಿ ಮೃತದೇಹ ಪತ್ತೆ
ಕುಂದಾಪುರ, ಆ.5: ಕೆಳಖಾರ್ವಿಕೇರಿಯ ಪಂಚಗಂಗಾವಳಿ ಹೊಳೆಯಲ್ಲಿ ಸುಮಾರು 30 ರಿಂದ 35 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಈ ವ್ಯಕ್ತಿಯು ಆಕಸ್ಮಿಕವಾಗಿ ಹೊಳೆಯ ನೀರಿನಲ್ಲಿ ಬಿದ್ದು ಮುಳುಗಿ ಮೃತ ಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story