ಉಡುಪಿ ಐಟಿಐ ಪ್ರವೇಶಕ್ಕೆ ಅರ್ಹ: ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಉಡುಪಿ, ಆ.5: ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ (ಐಟಿಐ) ಸಂಸ್ಥೆಯಲ್ಲಿ 2018ನೇ ಸಾಲಿನ ಪ್ರವೇಶಕ್ಕಾಗಿ ವಿವಿಧ ವೃತ್ತಿಗಳಲ್ಲಿ ಕೆಲವು ಸ್ಥಾನಗಳು ಖಾಲಿ ಉಳಿದಿದ್ದು, ಅವುಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಪ್ರವೇಶ ಬಯಸುವ ಎಸೆಸೆಲ್ಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅ್ಯರ್ಥಿಗಳು ಸಂಸ್ಥೆಗೆ ಖುದ್ದಾಗಿ ಹಾಜರಾಗಿ ನಿಗದಿತ ನಮೂನೆಯ ಅರ್ಜಿ ಪಡೆದು, ದಾಖಲಾತಿಗಳೊಂದಿಗೆ ಆ.6ರಿಂದ 13ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಯನ್ನು (ದೂರವಾಣಿ:0820-2986145) ಸಂಪರ್ಕಿಸುವಂತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.
Next Story