ಉಡುಪಿ :12ರಂದು ರಕ್ತದಾನ ಶಿಬಿರ
ಉಡುಪಿ, ಆ.6: ಉಡುಪಿ ಹಾಜಿ ಅಬ್ದುಲ್ಲಾ ಟ್ರಸ್ಟ್, ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಕಾರ್ಪೊರೇಶನ್ ಬ್ಯಾಂಕ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ, ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಝೇಶನ್, ಉಡುಪಿ ಟೌನ್ ಕೋ ಆಪರೇಟಿವ್ ಬ್ಯಾಂಕ್ನ ಸಂಯುಕ್ತ ಆಶ್ರಯದಲ್ಲಿ ಕೊಡುಗೈ ದಾನಿ ಹಾಜಿ ಅಬ್ದುಲ್ಲಾ ಸಂಸ್ಮರಣೆ ಪ್ರಯುಕ್ತ ಸ್ವಯಂ ಪೇರಿತ ರಕ್ತದಾನ ಶಿಬಿರವನ್ನು ಆ.12 ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1ಗಂಟೆಯವರೆಗೆ ಬಾಳಿಗಾ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story