ವಿದ್ಯಾಸಿರಿ: ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ
ಮಂಗಳೂರು, ಆ.6: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ಸಮುದಾಯದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಸರಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ದೊರಕದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯಧನ ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೆೇರಿ ಮೌಲಾನ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಅಥವಾ ಇಲಾಖಾ ವೆಬ್ಸೈಟ್ನಿಂದ (gokdom.kar.nic.in) ಡೌನ್ಲೋಡ್ ಮಾಡಿಕೊಂಡು ಸಲ್ಲಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
Next Story