ಉಡುಪಿ ಅಪರ ಜಿಲ್ಲಾಧಿಕಾರಿ ವರ್ಗಾವಣೆ
ಉಡುಪಿ, ಆ. 9: ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಜಿ. ಅನುರಾಧ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅವರನ್ನು ಯಾವ ಸ್ಥಳಕ್ಕೆ ವರ್ಗಾಯಿಸಲಾಗಿದೆ ಎಂಬುದನ್ನು ಈವರೆಗೆ ತಿಳಿಸಿಲ್ಲ. ಅವರಿಂದ ತೆರವಾದ ಜಾಗಕ್ಕೆ ಕೋಲಾರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿ ಅವರನ್ನು ವರ್ಗಾಯಿಸಿ ಆದೇಶ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story