ಶುಚಿತ್ವದಿಂದ ಜಂತುಹುಳು ಸಮಸ್ಯೆಗೆ ಪರಿಹಾರ: ನಳಿನಿ ಪ್ರದೀಪ್
ಉಡುಪಿ, ಆ.10: ನೈರ್ಮಲ್ಯದ ಕೊರತೆ ಹಾಗೂ ವೈಯಕ್ತಿಕ ಶುಚಿತ್ವದ ಕೊರತೆಯಿಂದ ಮಕ್ಕಳಲ್ಲಿ ಜಂತುಹುಳು ಬಾಧೆ ಕಂಡುಬರುತಿದ್ದು, ಆದುದರಿಂದ ಮಕ್ಕಳು ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ, ಸುತ್ತಲಿನ ಪರಿಸರ ಶುಚಿತ್ವ ಕಾಪಾಡುವಂತೆ ಹಾಗೂ ಸರಿಯಾದ ಕೈ ತೊಳೆಯುವ ವಿಧಾನವನ್ನು ಅಳವಡಿಸಿ ಕೊಳ್ಳುವಂತೆ ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಹೇಳಿದ್ದಾರೆ.
ಶುಕ್ರವಾರ ಬ್ರಹ್ಮಾವರದ ಬೋರ್ಡ್ ಹೈಸ್ಕೂಲ್ನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರ ಮತ್ತು ಬೋರ್ಡ್ ಹೈಸ್ಕೂಲ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡುತಿದ್ದರು.
ಶುಕ್ರವಾರ ಬ್ರಹ್ಮಾವರದ ಬೋರ್ಡ್ ಹೈಸ್ಕೂಲ್ನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರ ಮತ್ತು ಬೋರ್ಡ್ ಹೈಸ್ಕೂಲ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದರು. ಸ್ವಚ್ಛತೆಯನ್ನು ಕಡೆಗಣಿಸಿದರೆ ರೋಗಗಳು ಹರಡಲಿವೆ. ಆದ್ದರಿಂದ ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಿದ ನಳಿನಿ ಪ್ರದೀಪ್, ನಮ್ಮ ಸುತ್ತಲಿನ ಪರಿಸರವನ್ನು ಹಾಳು ಮಾಡದೆ ಅದನ್ನು ಮುಂದಿನ ಪೀಳಿಗೆಗೆ ಉಳಿಸುವ ಕೆಲಸವಾಗಬೇಕು. ಪ್ಲಾಸ್ಟಿಕ್ ಬಳಕೆಯನ್ನು ಹಂತಹಂತವಾಗಿ ಕಡಿಮೆ ಮಾಡುವಂತೆ ಮತ್ತು ತ್ಯಾಜ್ಯ ವನ್ನು ಸಮರ್ಪಕ ರೀತಿ ವಿಲೇವಾರಿ ಮಾಡುವಂತೆ ನಳಿನಿ ಪ್ರದೀಪ್ ತಿಳಿಸಿದರು.
ಜಂತುಹುಳುಗಳಿಂದ ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಕುಂಠಿತ ಗೊಳ್ಳಲಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ, ಕಾಲೇಜು ಮತ್ತು ಅಂಗನ ವಾಡಿಗಳಲ್ಲಿರುವ 1ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.
ವಾರಂಬಳ್ಳಿ ಗ್ರಾಪಂ ಅಧ್ಯಕ್ಷ ನವೀನ್ಚಂದ್ರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಪಂ ಸದಸ್ಯರಾದ ದಿನಕರ ಹೇರೂರು, ಗೋಪಿಕೆ ನಾಯ್ಕಾ, ಸುಧೀರ್ಕುಮಾರ್ ಶೆಟ್ಟಿ, ಚಾಂತಾರು ಗ್ರಾಪಂ ಅದ್ಯಕ್ಷೆ ಸರಸ್ವತಿ, ಹಾರಾಡಿ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಿ, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ, ಆರ್ಸಿಹೆಚ್ ಅಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಪ್ರೇಮಾನಂದ, ಬ್ರಹ್ಮಾವರ ಬೋರ್ಡ್ ಹೈಸ್ಕೂಲ್ನ ಪ್ರಾಂಶುಪಾಲ ರವೀಂದ್ರ ಉಪಾಧ್ಯ, ಉಪ ಪ್ರಾಂಶುಪಾಲ ಬಿ.ಟಿ.ನಾಯಕ್ ಉಪಸ್ಥಿತರಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ. ನಾಗರತ್ನ ಸ್ವಾಗತಿಸಿ, ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.