ಉಡುಪಿ: ಸ್ಥಳೀಯ ಸಂಸ್ಥೆ ಚುನಾವಣೆಗೆ ಅಧಿಸೂಚನೆ
ಉಡುಪಿ, ಆ.10:ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಾದ ಉಡುಪಿ ನಗರಸಭೆಯ 35 ವಾರ್ಡುಗಳಿಗೆ, ಕುಂದಾಪುರ ಪುರಸಭೆಯ 23 ವಾರ್ಡು, ಕಾರ್ಕಳ ಪುರಸಭೆಯ 23 ವಾರ್ಡು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ನ 16 ವಾರ್ಡುಗಳಿಗೆ ಸಾರ್ವತ್ರಿಕ ಚುನಾವಣೆಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭಗೊಂಡಿದ್ದು, ಆ.17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆ.18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರಗಳನ್ನು ಹಿಂದೆಗೆದುಕೊಳ್ಳಲು ಆ.20 ಕೊನೆಯ ದಿನವಾಗಿರುತ್ತದೆ. ಆ.29ರಂದು ಮತದಾನ (ಬೆಳಗ್ಗೆ 7ರಿಂದ ಸಂಜೆ 5ರವರೆಗೆ) ನಡೆಯಲಿದೆ. ಸೆ.3ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ (ಬೆಳಗ್ಗೆ 8ರಿಂದ) ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
Next Story