ಆ.13-14: ಮುಖ್ಯಮಂತ್ರಿ ಕುಮಾರಸ್ವಾಮಿ ದ.ಕ. ಜಿಲ್ಲಾ ಪ್ರವಾಸ
ಮಂಗಳೂರು, ಆ.12: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆ.13-14ರವರೆಗೆ ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಆ.13ರಂದು ಮಧ್ಯಾಹ್ನ 1:30ಕ್ಕೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಿಂದ ಹೊರಟು ರಸ್ತೆಯ ಮೂಲಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಸಂಜೆ 4:30ಕ್ಕೆ ಮುಖ್ಯಮಂತ್ರಿ ಆಗಮಿಸಲಿದ್ದಾರೆ. ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 6 ಗಂಟೆಗೆ ಧರ್ಮಸ್ಥಳದಿಂದ ಹೊರಟು ರಾತ್ರಿ 7 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ಆ.14ರಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ಬೆಳಗ್ಗೆ 9:30ಕ್ಕೆ ಕುಕ್ಕೆಯಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 2:30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story