ಮಂಗಳೂರು ವಿವಿ ಮಟ್ಟದ ಟೇಬಲ್ಟೆನಿಸ್ ಟೂರ್ನಿಗೆ ಚಾಲನೆ
ಉಡುಪಿ, ಆ.13: ಉಡುಪಿ ಎಂಜಿಎಂ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಕ್ರೀಡಾ ವಿಭಾಗದ ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಅಂತರ್ ಕಾಲೇಜು ಟೇಬಲ್ ಟೆನಿಸ್ ಟೂರ್ನಿಯನ್ನು ಎಂಜಿಎಂ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿತ್ತು.
ಟೂರ್ನಿಯನ್ನು ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಡಾ.ಪ್ರಸನ್ನ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ್ ವಹಿಸಿದ್ದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿ ದೇವಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಪ್ರೊ. ರಮೇಶ್ ಕಾರ್ಲ ಉಪಸ್ಥಿತರಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಜಯಶ್ರೀ ನಾಯಕ್ ಸ್ವಾಗತಿಸಿದರು. ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಈ ಪಂದ್ಯ ಕೂಟದಲ್ಲಿ ಮಂಗಳೂರು ವಿವಿ ಮಟ್ಟದ 32 ಕಾಲೇಜುಗಳ ತಂಡಗಳು ಭಾಗವಹಿಸಿದ್ದವು.
Next Story