ಅಡ್ಯಾರ್; ಡಿವೈಡರ್ಗೆ ಕಾರು ಢಿಕ್ಕಿ: ವ್ಯಕ್ತಿ ಸ್ಥಳದಲೇ ಮೃತ್ಯು
ಮಂಗಳೂರು, ಆ.14: ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಕಣ್ಣೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮಡಿಕೇರಿ ನಿವಾಸಿ ಮೋಹನ್ಕುಮಾರ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಕಣ್ಣೂರಿನಲ್ಲಿ ರಸ್ತೆಯ ಡಿವೈಡರ್ಗೆ ಢಿಕ್ಕಿ ಹೊಡೆದು ಬಳಿಕ ಬಸ್ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಪರಿಣಾಮ ಕಾರಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ಪಾಂಡೇಶ್ವರ ಪೊಲೀಸರು ಕೊಂಡೊಯ್ದಿದ್ದಾರೆ.
Next Story