ತಲಪಾಡಿ: ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿ ಕಾರು ಪಲ್ಟಿ; ನಾಲ್ವರಿಗೆ ಗಾಯ
ಬಂಟ್ವಾಳ, ಆ.15: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ವಿಭಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಅಪಾಯಕಾರಿ ತಿರುವಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಅಪಾಯಕಾರಿ ತಿರುವಿನಲ್ಲಿ ಈ ಅವಘಡ ಸಂಭವಿಸಿದೆ. ಅಪಘಾತಕ್ಕೀಡಾದ ಕಾರು ಬಳಿಕ ರಸ್ತೆ ಬದಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಢಿಕ್ಕಿಯಾಗುವುದರಿಂದ ಸ್ವಲ್ಪದರಲ್ಲೇ ತಪ್ಪಿದೆ.
ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
Next Story