ಉಡುಪಿ: ವಿವಿಧೆಡೆಗಳಲ್ಲಿ ಸ್ವಾತಂತ್ರೋತ್ಸವ ಆಚರಣೆ
ಉಡುಪಿ, ಆ. 15: ಉಡುಪಿ ಜಿಲ್ಲೆಯ ವಿವಿಧೆಡೆ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘ: ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಪ್ರವೀಣ್ ಕಾಮತ್ ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಧ್ವಜಾರೋಹಣ ನೆರವೇರಿಸಿದರು. ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಮಾಜಿ ಸೈನಿಕ ರವಿ ಹಾಗೂ ಇಲಾಖೆಯ ಸಿಬ್ಬಂದಿ ಗಳು ಹಾಜರಿದ್ದರು.
ಅಜ್ಜರಕಾಡು ಸರಕಾರಿ ನೌಕರರ ವಸತಿಗೃಹ: ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಗದೀಶ್ ಭಟ್ ಧ್ವಜಾರೋಹಣ ನೆರವೇರಿಸಿದರು. ವಸತಿಗೃಹಗಳ ನಿವಾಸಿಗಳು ಉಪಸ್ಥಿತರಿದ್ದರು.
Next Story