ಶಿರೂರು: ಗ್ರೀನ್ ವ್ಯಾಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಶಿರೂರು, ಆ. 15: ಗ್ರೀನ್ ವ್ಯಾಲಿ ನ್ಯಾಶನಲ್ ಸ್ಕೂಲ್ ಹಾಗೂ ಪಿ.ಯು ಕಾಲೇಜಿನಲ್ಲಿ ಬುಧವಾರ ಸಂಭ್ರಮದಿಂದ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಬೆಳಗ್ಗೆ 8.30ಕ್ಕೆ ಆರಂಭಗೊಂಡಿತು. ಪ್ರಾಂಶುಪಾಲ ಜಾನ್ ಮ್ಯಾಥ್ಯೂ ಅವರು ವಿದ್ಯಾರ್ಥಿ ನಾಯಕ ಮುಹಮ್ಮದ್ ದಾನಿಶ್ ಹಾಗೂ ವಿದ್ಯಾರ್ಥಿ ನಾಯಕಿ ಫೌಝಿಯಾ ಬೇಗಂ ಅವರೊಂದಿಗೆ ಧ್ವಜಾರೋಹಣ ನೆರವೇರಿಸಿದರು.
ನಂತರ ವಿದ್ಯಾರ್ಥಿಗಳಿಂದ ಪ್ರಹಸನ, ದೇಶಭಕ್ತಿ ಗೀತೆ ಹಾಗೂ ಇತರ ಕಾರ್ಯಕ್ರಮಗಳು ನಡೆದವು.
ಶಾಲಾ ವಿದ್ಯಾರ್ಥಿ ನಾಯಕಿ ವಿಂಧ್ಯಾ ಬಾದಲ್ ಸ್ವಾಗತಿಸಿದರು. ಫೌಝಿಯಾ ಬೇಗಂ ಸ್ವಾತಂತ್ರ ದಿನಾಚರಣೆಯ ಮಹತ್ವ ಹಾಗೂ ದೇಶಪ್ರೇಮದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಬಗ್ಗೆ ತಿಳಿಸಿದರು. ಉತ್ತರದಾಯಿ ನಾಗರಿಕರನ್ನು ರೂಪಿಸುವ ಮೂಲಕ ರಾಷ್ಟ ನಿರ್ಮಾಣಕ್ಕೆ ಕೈಜೋಡಿಸುವಂತೆ ಅವರು ವಿನಂತಿಸಿದರು. ವಿಂದ್ಯಾ ಎಸ್. ವಂದನೆ ಸಲ್ಲಿಸಿದರು.
Next Story