ಸೆ.15: ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಮಂಗಳೂರು, ಆ.16: ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಸೆ.15ರಂದು ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.
ಶಾಲೆಯ ಮುಖ್ಯಸ್ಥರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಸೌಮ್ಯಾ ಆರ್. ಶೆಟ್ಟಿ ಸಮ್ಮೇಳನದ ನೇತೃತ್ವ ವಹಿಸುವರು ಎಂದು ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಹಾಗೂ ಮಂಗಳೂರು ತಾಲೂಕು ಕಸಾಪ ಅಧ್ಯಕ್ಷೆ ಜಯಲಕ್ಷ್ಮಿ ಬಿ. ಶೆಟ್ಟಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story