ಟ್ಯಾಂಕರ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಉಡುಪಿ, ಆ.18: ಟ್ಯಾಂಕರೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಆ.17ರಂದು ರಾತ್ರಿ 10.45ರ ಸುಮಾರಿಗೆ ಸಂತೆಕಟ್ಟೆ ಆಶೀರ್ವಾದ ಟಾಕೀಸ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ನವೀನ್ ಎಂದು ಗುರುತಿಸಲಾಗಿದೆ. ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮುಂಭಾಗದಲ್ಲಿ ಹೋಗುತ್ತಿದ್ದ ಬೈಕ್ಗೆ ಹಿಂಬದಿಯಿಂದ ಢಿಕ್ಕಿ ಹೊಡೆಯಿತು. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ನವೀನ್ ಉಡುಪಿ ಜಿಲ್ಲಾಸ್ಪತ್ರೆಗೆ ಕರೆದು ಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story