ಆ.26: ‘ಪ್ರೊಫೆಷನೋವಾ’ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
ಮಂಗಳೂರು, ಆ.20: ‘ಪ್ರೊಫೆಷನೋವಾ’ ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವು ಆ. 26ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1:30ರವರೆಗೆ ಕೊಡಿಯಾಲ್ಬೈಲ್ನ ಕೆನರಾ ಹೆಣ್ಮಕ್ಕಳ ಪ್ರೌಢಶಾಲೆಯ ಸುಧೀಂದ್ರ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಅಭಿಜ್ಞಾ ಎಜುಕೇಶನ್ ಪ್ರೈವೇಟ್ ಲಿಮಿಟೆಡ್ ಈ ಕಾರ್ಯಕ್ರಮ ಆಯೋಜಿಸಿದೆ ಎಂದು ಅಭಿಜ್ಞಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಭಿಲಾಷ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವೃತ್ತಿ ಮಾರ್ಗದರ್ಶನದಲ್ಲಿ ಎಂಬಿಎ, ಎಂಟೆಕ್, ಎಂಎಸ್, ಬ್ಯಾಂಕಿಂಗ್, ಸರಕಾರಿ ಉದ್ಯೋಗ, ಸ್ವಂತ ಉದ್ಯೋಗ ಹಾಗೂ ಇನ್ನಿತರ ವಿಷಯಗಳ ಕುರಿತಂತೆ ಎಂಟು ಮಂದಿ ಸಂಪನ್ಮೂಲ ವ್ಯಕ್ತಿಗಳು ಸೂಕ್ತ ಮಾಹಿತಿ ನೀಡಲಿದ್ದಾರೆ. ಈಗಾಗಲೇ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಶಿಬಿರದ ಕುರಿತು ಮಾಹಿತಿ ನೀಡಲಾಗಿದ್ದು, ಸುಮಾರು 600 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷಯಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಿ ರೀಚ್ ಆ್ಯಂಡ್ ವರ್ಧಾನ್ ಅಕಾಡಮಿಯ ನಿರ್ದೇಶಕ ಸಂತೋಷ್ ಪ್ರಭು ಉಪಸ್ಥಿತರಿದ್ದರು.