ಬಂಟ್ವಾಳ: ಅಂಗಡಿಗೆ ಬೆಂಕಿ; ಲಕ್ಷಾಂತರ ರೂ. ನಷ್ಟ
ಬಂಟ್ವಾಳ, ಆ. 24: ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಬಂಟ್ವಾಳ ಗ್ರಾಮಂತರ ಠಾಣೆ ವ್ಯಾಪ್ತಿಯ ನಾವೂರ ಎಂಬಲ್ಲಿ ಸಂಭವಿಸಿದೆ.
ಬಂಟ್ವಾಳ ತಾಲೂಕಿನ ನಾವೂರ ಗ್ರಾಮದ ಮೈಂದಾಳ ಲಿಕಾಯತ್ ಎಂಬವರ ಬೆಡ್ ಮಾರ್ಟ ಅಂಗಡಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಸುಮಾರು ನಾಲ್ಕು ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಘಟನೆಯಿಂದ ಬೆಡ್ ಶೀಟುಗಳನ್ನು ತಯಾರಿಸುವ ಕಚ್ಛಾವಸ್ತುಗಳು ಸೇರಿದಂತೆ ತಯಾರು ಮಾಡಲಾಗಿದ್ದ ಬೆಡ್ ಶೀಟುಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ.
ಬಂಟ್ವಾಳ ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story