ಬಂಟ್ವಾಳ: ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಮಹಿಳೆ ಮೃತ್ಯು
ಬಂಟ್ವಾಳ, ಆ. 24: ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಸಹ ಸವಾರೆ ಮೃತಪಟ್ಟ ಘಟನೆ ಕಬಕ ಸಮೀಪದ ನೀರಳಿಕೆ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.
ಉಪ್ಪಿನಂಗಡಿ ಸಮೀಪದ ಕರಾಯ ನಿವಾಸಿ ಮುಮ್ತಾಝ್ (35) ಮೃತರು ಎಂದು ಗುರುತಿಸಲಾಗಿದೆ.
ಇವರು ತಮ್ಮ ಪತಿ ಅಶ್ರಫ್ ಜೊತೆ ಬೈಕಿನಲ್ಲಿ ಪಯಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ನೀರಳಿಕೆ ಸಮೀಪ ಬೈಕ್ ಚಲಾಯಿಸುತ್ತಿದ್ದ ಪತಿ ರಸ್ತೆಯ ಗುಂಡಿ ತಪ್ಪಿಸಲು ಯತ್ನಿಸಿದ ಸಂದರ್ಭ, ಹಿಂಬದಿ ಕುಳಿತಿದ್ದ ಸಹಸವಾರೆ ಮಮ್ತಾಝ್ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಮಹಿಳೆಯ ಸಹೋದರ ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story