ಉಡುಪಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾರ್ಮಿಕರಿಗೆ ವೇತನ ಸಹಿತ ರಜೆ
ಉಡುಪಿ, ಆ.25: ಆ.31ರಂದು ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಯಾ ಕ್ಷೇತ್ರಗಳ ಅರ್ಹ ಕಾರ್ಮಿಕ ಮತದಾರರಿಗೆ ಮತ ಚಲಾಯಿಸಲು ಅವಕಾಶ ಮಾಡಿಕೊಡುವ ಹಿನ್ನೆಲೆಯಲ್ಲಿ ಆ.31ರಂದು ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ.
ಮತದಾರ ಕಾರ್ಮಿಕರಿಗೆ ತಪ್ಪದೇ ವೇತನ ಸಹಿತ ರಜೆ ಘೋಷಿಸಿ ಎಲ್ಲಾ ಅರ್ಹ ಕಾರ್ಮಿಕರು ಮತದಾನ ಮಾಡಿ ತಮ್ಮ ಮೂಲಭೂತ ಹಕ್ಕು ಚಲಾಯಿ ಸಲು ಅನುವು ಮಾಡಿಕೊಡಲು ಹಾಗೂ ಯಾವುದೇ ಕಾರ್ಖಾನೆ ನಿರಂತರ ಉತ್ಪಾದನೆಯಲ್ಲಿ ತೊಡಗುವುದು ಅನಿವಾರ್ಯವೆಂದು ಕಂಡುಬಂದಲ್ಲಿ ಅಲ್ಲಿ ಪರ್ಯಾಯ ವ್ಯವಸ್ಥೆ ರೂಪಿಸಿಕೊಂಡು ಉತ್ಪಾದನೆಗೆ ಸಂಬಂಧಪಟ್ಟ ಕಾರ್ಮಿಕ ರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಾಕಷ್ಟು ಕಾಲಾವಕಾಶ ಮಾಡಿಕೊಡಬೇಕೆಂದು ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ ಇಲಾಖೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story