ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಮಳವೂರು ಗ್ರಾಮಕ್ಕೆ 6.75 ಕೋ.ರೂ. ವೆಚ್ಚದಲ್ಲಿ ಚರಂಡಿ ನಿರ್ಮಾಣ ಯೋಜನೆ
ಮಂಗಳೂರು, ಆ.28: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ 6.75 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ವಿಮಾನ ನಿಲ್ದಾಣದ ಪಕ್ಕದಲ್ಲಿರುವ ಮಳವೂರು ಗ್ರಾಮದಲ್ಲಿ ಸುಸಜ್ಜಿತ ಚರಂಡಿ ನಿರ್ಮಾಣದ ಯೋಜನೆ ಹಮ್ಮಿಕೊಂಡಿದೆ. ಈ ಬಗ್ಗೆ ್ತ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ರಾಜ್ಯ ಸರಕಾರದೊಂದಿಗೆ ಮುಂದಿನ ವಾರ ಒಡಂಬಡಿಕೆ ಮಾಡಿಕೊಳ್ಳಲು ನಿರ್ಧರಿಸಿದೆ ಎಂದು ಪ್ರಕಟನೆ ತಿಳಿಸಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣೆಯ ನಿಯಮದ ಪ್ರಕಾರ ರಾಜ್ಯ ಸರಕಾರದ ನಿರ್ವಹಣೆಯ ಮೂಲಕ ಈ ಯೋಜನೆ ಕಾರ್ಯಗತಗೊಳ್ಳಲಿದೆ. ವಿಮಾನ ನಿಲ್ದಾಣದ ಬಳಿಯ ಜನರ ಆಸ್ತಿ ಪಾಸ್ತಿಯನ್ನು ನೆರೆ ನೀರಿನಂತಹ ಪ್ರಾಕೃತಿಕ ವಿಕೋಪದಿಂದ ಸಂರಕ್ಷಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.
Next Story