ಬಂಟ್ವಾಳ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಆಡಳಿತ: ಅಶ್ವಿನಿ ಕುಮಾರ್ ರೈ
ಬಂಟ್ವಾಳ, ಆ. 28: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣವಿದ್ದು, ಈ ಬಾರಿಯೂ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಮತ್ತೆ ಪುರಸಭೆಯ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ, ವಕೀಲ ಅಶ್ವಿನಿ ಕುಮಾರ್ ರೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ಮಂಗಳವಾರ ಸಂಜೆ ಬಿ.ಸಿ.ರೋಡಿನಲ್ಲಿ ಹೊಟೇಲೊಂದರಲ್ಲಿ ಕರೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಮಗ್ರ ಅಭಿವೃದ್ಧಿಯನ್ನು ಮಾಡಿದ್ದು, ಪುರವಾಸಿಗಳು ಕಾಂಗ್ರೆಸ್ಗೆ ಮತ್ತೆ ಆಶೀರ್ವಾದ ಮಾಡಲಿದ್ದಾರೆ ಎಂದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯು ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ ಎಂದ ಹೇಳಿದರು. ಪುರಸಭಾ ವಾರ್ಡ್ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಾರದರ್ಶಕ ಆಡಳಿತ ನೀಡಲಿದೆ ಎಂದರು.
ತ್ಯಾಜ್ಯ ವಿಲೇವಾರಿ ಘಟಕ, ಕುಡಿಯುವ ನೀರಿನ ಯೋಜನೆ, ಪಾರ್ಕಿಂಗ್ ವ್ಯವಸ್ಥೆಯನ್ನು ಹಂತಹಂತವಾಗಿ ಪರಿಹಾರ ಕಂಡುಕೊಳ್ಳಲಾಗವುದು ಎಂದರು.
ಸುದ್ದಿಗೋಷ್ಠಿಯಲ್ಲಿ ನೋಣಯ್ಯ ಪೂಜಾರಿ, ಬಾಲಚಂದ್ರ ಶೆಟ್ಟಿ, ಉಮರ್ ಮಂಚಿ, ಆಶ್ರಫ್, ಇಬ್ರಾಹಿಂ, ಸುಜಾತ ಮಂಚಿ ಉಪಸ್ಥಿತರಿದ್ದರು.