ನೇಣು ಬಿಗಿದ ಸ್ಥಿತಿಯಲ್ಲಿ ಬೇಡಡ್ಕ ಗ್ರಾಪಂ ಸ್ಥಾಯಿ ಸಮಿತಿ ಅಧ್ಯಕ್ಷನ ಮೃತದೇಹ ಪತ್ತೆ
ಕಾಸರಗೋಡು, ಆ.29: ಬೇಡಡ್ಕ ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ಸುಕುಮಾರನ್(48) ಅವರ ಮೃತದೇಹ ಮನೆ ಸಮೀಪದ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ.
ನಿನ್ನೆ ಮನೆಯಿಂದ ತೆರಳಿದ್ದ ಸುಕುಮಾರನ್ ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಮನೆಯವರು ಅವರ ಮೊಬೈಲ್ ಫೋನ್ಗೆ ಕರೆ ಮಾಡಿದರೂ ಸಂಪರ್ಕಿಸಲೂ ಸಾಧ್ಯವಾಗಲಿಲ್ಲ. ಇದರಿಂದ ಮನೆಯವರು, ಸಂಬಂಧಿಕರು ಹುಡುಕಾಟ ನಡೆಸಿದ್ದರು. ಇಂದು ಬೆಳಗ್ಗೆ ಮನೆ ಹಿತ್ತಿಲಿನ ಗೇರು ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಸುಕುಮಾರನ್ ಸಿಪಿಎಂ ಪ್ರಾದೇಶಿಕ ಸಮಿತಿಯ ಕಾರ್ಯದರ್ಶಿಯಾಗಿದ್ದರು. ಈ ಬಗ್ಗೆ ಬೇಡಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story