ಉಳ್ಳಾಲ ನಗರಸಭೆ: ಅತಂತ್ರ ಫಲಿತಾಂಶ, ಅತಿದೊಡ್ಡ ಪಕ್ಷವಾಗಿ ಕಾಂಗ್ರೆಸ್
ಉಳ್ಳಾಲ, ಸೆ.3: ಉಳ್ಳಾಲ ನಗರಸಭೆಯ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸ್ಪಷ್ಟ ಬಹುಮತ ಗಳಿಸದಿರುವುದರಿಂದ ಅತಂತ್ರ ಫಲಿತಾಂಶ ಉಂಟಾಗಿದೆ.
ಒಟ್ಟು 31 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 13, ಎಸ್ಡಿಪಿಐ 6, ಬಿಜೆಪಿ 6, ಜೆಡಿಎಸ್ 4 ಹಾಗೂ ಮೂವರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಒಂದು ವಾರ್ಡ್ನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿ ಸಮಾನ ಮತಗಳನ್ನು ಗಳಿಸಿದ್ದಾರೆ. ಇಲ್ಲಿ ಅಂತಿಮವಾಗಿ ವಿಜೇತ ಅಭ್ಯರ್ಥಿಗಳನ್ನು ಚೀಟಿ ಎತ್ತುವ ಮೂಲಕ ಆರಿಸಲಾಯಿತು. ಇದರಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಅವರು ಅದೃಷ್ಟದ ಗೆಲುವು ಸಾಧಿಸಿದ್ದಾರೆ. ಇವರ ಗೆಲುವಿನೊಂದಿಗೆ ಬಿಜೆಪಿ ಒಟ್ಟು ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿದಂತಾಯಿತು.
Next Story