ದ.ಕ.ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆ: ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲು ಪ್ರಕಟ
ಮಂಗಳೂರು, ಸೆ.4: ದ.ಕ.ಜಿಲ್ಲೆಯ ಉಳ್ಳಾಲ ಮತ್ತು ಪುತ್ತೂರು ನಗರಸಭೆ ಹಾಗೂ ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲು ಪಟ್ಟಿಯನ್ನು ಪ್ರಕಟಿಸಲಾಗಿದೆ.
ಉಳ್ಳಾಲ ನಗರಸಭೆಯ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ‘ಎ’ ಮತ್ತು ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ‘ಬಿ’ಗೆ ಮೀಸಲಿಡಲಾಗಿದೆ. ಪುತ್ತೂರು ನಗರಸಭೆಯ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿಡಲಾಗಿದೆ. ಬಂಟ್ವಾಳ ಪುರಸಭೆಯ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ‘ಎ’ಗೆ ಮೀಸಲಿಡಲಾಗಿದೆ.
Next Story