ಕಾಲುನೋವು: ಆಸ್ಪತ್ರೆಗೆ ದಾಖಲಾದ ಸಚಿವ ಯು.ಟಿ. ಖಾದರ್
ಮಂಗಳೂರು, ಸೆ.4: ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಎಡಗಾಲಿನ ತೀವ್ರ ನೋವಿಗೆ ಚಿಕಿತ್ಸೆ ಪಡೆಯಲು ಮಂಗಳವಾರ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚಿನ ತಿಂಗಳಲ್ಲಿ ರಾಜ್ಯ ಹಾಗೂ ಜಿಲ್ಲೆಯಾದ್ಯಂತ ಸತತ ಪ್ರಯಾಣ ಹಾಗೂ ಕೆಲಸದಿಂದ ಕಳೆದೊಂದು ವಾರದಿಂದ ತೀವ್ರ ಕಾಲು ನೋವಿನಿಂದ ಖಾದರ್ ಬಳಲುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ಇತ್ತೀಚೆಗೆ ತಾತ್ಕಾಲಿಕ ಚಿಕಿತ್ಸೆ ಪಡೆದಿದ್ದರು. ಮತ್ತೆ ನೋವು ಮರುಕಳಿಸಿದ್ದು, ವೈದ್ಯರ ಸಲಹೆ ಮೇರೆಗೆ ಬುಧವಾರದಿಂದ ಐದು (5) ದಿನಗಳ ಕಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಕಚೇರಿಯ ಪ್ರಕಟನೆ ತಿಳಿಸಿದೆ.
ಸಾರ್ವಜನಿಕ ಕೆಲಸಕ್ಕಾಗಿ ಸಂಪರ್ಕ ಸಂಖ್ಯೆ
ಸಾರ್ವಜನಿಕರು ಈ ಸಂದರ್ಭದಲ್ಲಿ ಯಾವುದೇ ಕೆಲಸಕ್ಕಾಗಿ ಸಚಿವರ ಆಪ್ತ ಸಹಾಯಕರಾದ ಲಿಬ್ ಝತ್ (7204440444), ವಿಜಯ್ (9343346439) ಅವರನ್ನು ಸಂಪರ್ಕಿಸಬಹುದು ಎಂದು ಕಚೇರಿಯ ಪ್ರಕಟನೆ ತಿಳಿಸಿದೆ.
Next Story