ಉಡುಪಿ: ಸೆ.5ರಂದು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ
ಉಡುಪಿ, ಸೆ.4: ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ, ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸೆ.5ರಂದು ಬೆಳಗ್ಗೆ 10 ಕ್ಕೆ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.
Next Story